TSK

TSK · 2 ಪೂರ್ವಕಾಲವೃತ್ತಾ 21:13

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.

ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.

ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.

ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.

ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.

ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.

ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.

ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.

ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!