ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
TSK
TSK · 2 ಪೂರ್ವಕಾಲವೃತ್ತಾ 6:21
Treasury of Scripture Knowledge references in Kannada KJV.
ನಿನ್ನ ಜನರ ಅಕ್ರಮವನ್ನು ಪರಿಹರಿಸಿದ್ದೀ; ಅವರ ಪಾಪವನ್ನೆಲ್ಲಾ ಮುಚ್ಚಿದ್ದೀ ಸೆಲಾ.
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು.
ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.