ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
TSK
TSK · 2 ಪೂರ್ವಕಾಲವೃತ್ತಾ 9:21
Treasury of Scripture Knowledge references in Kannada KJV.
1 ಅರಸುಗಳು 10:22
TSK
ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
ಯೋಬನು 39:13
TSK
ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ?
ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
ಯೋನ 1:3
TSK
ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.