TSK

TSK · ಅಪೊಸ್ತಲರ ಕೃತ್ಯಗ 21:3

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.

ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.

ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.

ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್‌ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.

ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.

ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.

ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.

ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.

ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ

ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.