TSK

TSK · ಅಪೊಸ್ತಲರ ಕೃತ್ಯಗ 22:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.

ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ

ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.

ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.

ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.

ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)