TSK

TSK · ದಾನಿಯೇಲನು 1:7

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್‌ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.

ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.

ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.

ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.

ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.

ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.