ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
TSK
TSK · ದಾನಿಯೇಲನು 2:22
Treasury of Scripture Knowledge references in Kannada KJV.
ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.
ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.