ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
TSK
TSK · ದಾನಿಯೇಲನು 4:18
Treasury of Scripture Knowledge references in Kannada KJV.
ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.
ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.