ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
TSK
TSK · ದಾನಿಯೇಲನು 8:2
Treasury of Scripture Knowledge references in Kannada KJV.
¶ ಹಕಲ್ಯನ ಮಗನಾದ ನೆಹೆವಿಾಯನ ಮಾತುಗಳು. ಇಪ್ಪತ್ತನೇ ವರುಷದ ಕಿಸ್ಲೇವ್ ತಿಂಗಳಲ್ಲಿ ನಾನು ಶೂಷನ್ ಅರಮನೆಯಲ್ಲಿ ರುವಾಗ ಏನಾಯಿತಂದರೆ, ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯೂ ಯೆಹೂದದಲ್ಲಿದ್ದ ಕೆಲವರು ಬಂದರು.
ಅರಸನ ಮಾತೂ ಅವನ ಕಟ್ಟ ಳೆಯೂ ಕೇಳಿದ ತರುವಾಯ ಶೂಷನ್ ಅರಮನೆಯಲ್ಲಿ ಹೇಗೈಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪ ಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಕೈಗೆ ಒಪ್ಪಿಸಲ್ಪಟ್ಟಳು.
ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
¶ ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು