TSK

TSK · ದಾನಿಯೇಲನು 8:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್‌ ಪ್ರಭುವು ಬರುವನು.

ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್‌ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.