ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
TSK
TSK · ದಾನಿಯೇಲನು 9:2
Treasury of Scripture Knowledge references in Kannada KJV.
ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
¶ ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;
ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು.
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.