ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬ್ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.
TSK
TSK · ವಿಮೋಚನಕಾಂಡ 16:12
Treasury of Scripture Knowledge references in Kannada KJV.
ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?
ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.