TSK

TSK · ಆದಿಕಾಂಡ 21:1

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.

ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.

ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.

ಕರ್ತನು ಇಸ್ರಾಯೇಲ್‌ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.

ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್‌ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್‌ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.

ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.

ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.

ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.

(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.