ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
TSK
TSK · ಆದಿಕಾಂಡ 21:10
Treasury of Scripture Knowledge references in Kannada KJV.
ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.