TSK

TSK · ಆದಿಕಾಂಡ 21:20

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.

ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.

ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.

ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.

ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.

ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು.