TSK

TSK · ಆದಿಕಾಂಡ 21:22

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.

ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;

ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.

ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.

ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.

ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.

ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.