ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
TSK
TSK · ಆದಿಕಾಂಡ 21:33
Treasury of Scripture Knowledge references in Kannada KJV.
ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.
ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.