ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
TSK
TSK · ಆದಿಕಾಂಡ 21:6
Treasury of Scripture Knowledge references in Kannada KJV.
ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ.
ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.