ಅಬ್ರಾಮನು ಕಾನಾನ್‌ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
TSK
TSK · ಆದಿಕಾಂಡ 21:9
Treasury of Scripture Knowledge references in Kannada KJV.
ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.