TSK

TSK · ಆದಿಕಾಂಡ 45:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.

ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್‌ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.

ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.

ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.

ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.