TSK

TSK · ಯೆಶಾಯ 13:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.

ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.

ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್‌ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.