TSK

TSK · ಯೆಶಾಯ 19:1

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.

ಹೇಗಂದರೆ ಕರ್ತನು ಅವರಲ್ಲಿ ಸಮಸ್ತ ಚೊಚ್ಚಲಿನವರನ್ನು ಹೊಡೆದದ್ದರಿಂದ ಐಗುಪ್ತ್ಯರು ಹೂಣಿಡುತ್ತಿದ್ದರು; ಕರ್ತನು ಅವರ ದೇವರುಗಳಿಗೂ ತೀರ್ಪು ಮಾಡಿದನು.

ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.

ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.

ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.

ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.

ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.

ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.

ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್‌ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.

ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ

ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.

ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.

ನಾನು ಬಾಬೆಲಿನಲ್ಲಿರುವ ಬೇಲ್‌ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.

ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.

ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.

ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.