ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
TSK
TSK · ಯೋಹಾನನು 4:21
Treasury of Scripture Knowledge references in Kannada KJV.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.
ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.