ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
TSK
TSK · ಯಾಜಕಕಾಂಡ 18:21
Treasury of Scripture Knowledge references in Kannada KJV.
ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;
ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.
ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್‌ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್‌ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು.
ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.