TSK

TSK · ಲೂಕನು 22:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.

ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.

ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.

ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.