TSK

TSK · ಮಾರ್ಕನು 8:13

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.

ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!

ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.

ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.

ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.

ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ