ಕೀರ್ತನೆಗಳು 94:8
TSK
ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
TSK
Treasury of Scripture Knowledge references in Kannada KJV.
ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
ಅವರ ಹೃದಯವು ಕಠಿಣವಾಗಿ ದ್ದದರಿಂದ ಅವರು ರೊಟ್ಟಿಗಳ ಅದ್ಭುತವನ್ನು ಗ್ರಹಿಸ ಲಿಲ್ಲ.
ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.