ಮತ್ತಾಯನು 11:14
TSK
ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
TSK
Treasury of Scripture Knowledge references in Kannada KJV.
ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.