TSK

TSK · ಮತ್ತಾಯನು 21:5

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.

ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.

ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.

ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.

ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.

ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.

ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,

ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.

ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.

ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.

ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.

ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.

ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.

ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.

ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ

ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.

ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.