TSK

TSK · ಅರಣ್ಯಕಾಂಡ 18:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.

ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.

ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ.

ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.

ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.

ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್‌ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;

ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;

ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.

ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.

ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.