TSK

TSK · ಅರಣ್ಯಕಾಂಡ 21:2

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು

ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.

ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು.

ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.

ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ

ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.

ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).