ವಿಮೋಚನಕಾಂಡ 39:1
TSK
ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
TSK
Treasury of Scripture Knowledge references in Kannada KJV.
ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.