ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
TSK
TSK · ಙ್ಞಾನೋಕ್ತಿಗಳು 1:33
Treasury of Scripture Knowledge references in Kannada KJV.
ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.
ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.