TSK

TSK · ಙ್ಞಾನೋಕ್ತಿಗಳು 10:14

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.

ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.

ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.

ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು.

ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.

ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.