ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.
TSK
TSK · ಙ್ಞಾನೋಕ್ತಿಗಳು 13:12
Treasury of Scripture Knowledge references in Kannada KJV.
ಆದಕಾರಣ ಅರಸನು ನನಗೆ--ನಿನಗೆ ಕಾಯಿಲೆ ಇಲ್ಲದೆ ನಿನ್ನ ಮುಖವು ದುಃಖವಾಗಿರುವದೇನು? ನಿನಗೆ ರೋಗವಿಲ್ಲವಲ್ಲಾ? ಇದು ಮನೋ ದುಃಖವಲ್ಲದೆ ಮತ್ತೊಂದಲ್ಲ ಅಂದನು.
ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.
ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.