TSK

TSK · ಙ್ಞಾನೋಕ್ತಿಗಳು 13:20

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅಬ್ರಾಮನು ಕಾನಾನ್‌ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.

ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.

ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.

ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.

ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.

ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ

ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.

ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ.

ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.

ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.