TSK

TSK · ಙ್ಞಾನೋಕ್ತಿಗಳು 13:7

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.

ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.

ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.

ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.

ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.

ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.

ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.

ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.