TSK

TSK · ಙ್ಞಾನೋಕ್ತಿಗಳು 14:32

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.

ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;

ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.

ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.

ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.

ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.

ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.

ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;

ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.

ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.

ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ

ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್‌.