ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.
TSK
TSK · ಙ್ಞಾನೋಕ್ತಿಗಳು 14:6
Treasury of Scripture Knowledge references in Kannada KJV.
ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.