TSK

TSK · ಙ್ಞಾನೋಕ್ತಿಗಳು 17:11

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.

ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.

ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.

ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.

ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.

ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.

ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.