ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
TSK
TSK · ಙ್ಞಾನೋಕ್ತಿಗಳು 17:14
Treasury of Scripture Knowledge references in Kannada KJV.
ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.
ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.
ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.