TSK

TSK · ಙ್ಞಾನೋಕ್ತಿಗಳು 17:5

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,

ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.

ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.

ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.

ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.

ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;