ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
TSK
TSK · ಙ್ಞಾನೋಕ್ತಿಗಳು 18:6
Treasury of Scripture Knowledge references in Kannada KJV.
ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.