TSK

TSK · ಙ್ಞಾನೋಕ್ತಿಗಳು 20:15

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.

ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.

ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.

ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.

ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!

ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.

ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.

ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?