TSK

TSK · ಙ್ಞಾನೋಕ್ತಿಗಳು 20:18

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.

ಇಗೋ, ನೀವೆಲ್ಲರು ಇಸ್ರಾಯೇಲ್‌ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.

ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್‌ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.

ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.

ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು.

ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.

ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.

ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?