ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
TSK
TSK · ಙ್ಞಾನೋಕ್ತಿಗಳು 21:20
Treasury of Scripture Knowledge references in Kannada KJV.
ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇ.
ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.
ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.