TSK

TSK · ಙ್ಞಾನೋಕ್ತಿಗಳು 22:4

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.

ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.

ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.

ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.

ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.

ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.