ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.
TSK
TSK · ಙ್ಞಾನೋಕ್ತಿಗಳು 22:7
Treasury of Scripture Knowledge references in Kannada KJV.
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ