TSK

TSK · ಙ್ಞಾನೋಕ್ತಿಗಳು 24:16

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.

ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.

ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.

ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.

ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.

ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.

ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.

ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.

ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.

ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.

ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.

ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.