TSK

TSK · ಙ್ಞಾನೋಕ್ತಿಗಳು 24:28

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.

ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.

ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.

ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.

ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.

ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.

ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.

ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.

ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.

ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.